alex Certify BIG NEWS: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ: ಶಾಲಾ, ಕಾಲೇಜು, ಕಚೇರಿ ಬಂದ್; ಸ್ವಚ್ಛತೆ ಸ್ಥಗಿತ, ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ: ಶಾಲಾ, ಕಾಲೇಜು, ಕಚೇರಿ ಬಂದ್; ಸ್ವಚ್ಛತೆ ಸ್ಥಗಿತ, ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರ ಕೈಗೊಂಡಿದ್ದಾರೆ.

ನೌಕರರ ಮುಷ್ಕರದಿಂದಾಗಿ ನಾಳೆಯಿಂದ ಶಾಲಾ, ಕಾಲೇಜು, ಕಚೇರಿ, ಆಸ್ಪತ್ರೆ ಬಂದ್ ಆಗುವ ಸಾಧ್ಯತೆ ಇದೆ. ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಗ್ರಾಮ ಪಂಚಾಯಿತಿ ನೌಕರರು, ಪುರಸಭೆ, ನಗರಸಭೆ, ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ ಪೌರಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಸ್ವಚ್ಛತೆ ಇತರೆ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಸಬ್ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದು, ಆಸ್ತಿ ನೋಂದಣಿ ಕಾರ್ಯಕ್ಕೆ ಹಿನ್ನಡೆಯಾಗಲಿದೆ. ಶಾಲಾ, ಕಾಲೇಜುಗಳ ಶಿಕ್ಷಕರು. ಉಪನ್ಯಾಸಕರು. ಪ್ರಾಧ್ಯಾಪಕರು ಕೆಲಸಕ್ಕೆ ಗೈರುಹಾಜರಾಗಿ ಮುಷ್ಕರದಲ್ಲಿ ಭಾಗವಹಿಸುವುದರಿಂದ ಪ್ರಾಥಮಿಕ ಶಾಲೆಗಳಿಂದ ಪದವಿ ಕಾಲೇಜುಗಳವರೆಗೆ ತರಗತಿಗಳು ನಡೆಯುವ ಸಾಧ್ಯತೆ ಇಲ್ಲ.

ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಘಟಕ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲಿದ್ದು, ಹೊರ ರೋಗಿಗಳ ಸೇವೆ ಇರುವುದಿಲ್ಲ. ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆ, ಕಾರ್ಯ ಚಟುವಟಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...