
ಶಿವಮೊಗ್ಗ: ರಾಜ್ಯ ಸರ್ಕಾರ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 1 ರಿಂದ ನೌಕರರು ಕರ್ತವ್ಯಕ್ಕೆ ಹಾಜರಾಗರಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೋಗ ಜಾರಿಗೆ ಮಧ್ಯಂತರ ಆದೇಶ ಹೊರಡಿಸಬೇಕು. ಎನ್.ಪಿ.ಎಸ್. ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸೌಧದವರೆಗಿನ ಎಲ್ಲಾ ಸರ್ಕಾರಿ ಕೆಲಸಗಳು ಮಾರ್ಚ್ 1 ರಿಂದ ಸ್ಥಗಿತಗೊಳ್ಳಲಿದೆ. ಐಸಿಯು, ಎಂಐಸಿಯು ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ವೈದ್ಯರು ಶುಶ್ರೂಷಕಿಯರು ಸೇವೆ ಸ್ಥಗಿತಗೊಳಿಸಲಿದ್ದಾರೆ. ಬೇಡಿಕೆ ಈಡೇರಿಸಿದಲ್ಲಿ ಮುಷ್ಕರ ಹಿಂಪಡೆಯುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಲಾಗಿದೆ.