ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಕೆಲವೆಡೆ ಬಸ್ ಸಂಚಾರ ಆರಂಭವಾಗಿದ್ದರೂ ಫಲಪ್ರದವಾಗಿಲ್ಲ. ಸರ್ಕಾರದ ಎಚ್ಚರಿಕೆಗೆ ಜಗ್ಗದ ನೌಕರರು ಇಂದು ಕೂಡ ಮುಷ್ಕರ ಮುಂದುವರೆಸಲು ಮುಂದಾಗಿದ್ದಾರೆ.
ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ 128 ಸಿಬ್ಬಂದಿಯನ್ನು ವಜಾಗೊಳಿಸಿದೆ. ನಿವೃತ್ತ ಚಾಲಕರು ಮತ್ತು ನಿರ್ವಾಹಕರ ನಿಯೋಜಿಸಲು ಅರ್ಜಿ ಆಹ್ವಾನಿಸಿದೆ. ಎಸ್ಮಾ ಜಾರಿಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ಖಾಸಗಿ ವಾಹನಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯ ಸರ್ಕಾರದ ಮನವಿ, ಎಚ್ಚರಿಕೆ ನೋಟಿಸ್ ಗೆ ಜಗ್ಗದೆ ಸಾರಿಗೆ ನೌಕರರು ಮುಷ್ಕರ ಮುಂದುವರಿಸಿದ್ದಾರೆ. ಇದರಿಂದಾಗಿ ಜನಸಾಮಾನ್ಯರು ಬಸ್ ಸೌಲಭ್ಯವಿಲ್ಲದೇ ಹೈರಾಣಾಗಿದ್ದಾರೆ.