ಬೆಂಗಳೂರು: ಮುಷ್ಕರ ಕೈಗೊಂಡಿದ್ದ ಸಾರಿಗೆ ಸಂಸ್ಥೆಯ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ. ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
ಏಪ್ರಿಲ್ 7 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಎಲ್ಲಾ ನೌಕರರು ಕಡ್ಡಾಯ ಹಾಜರಿಗೆ ಆದೇಶ ಹೊರಡಿಸಲಾಗಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಆದೇಶ ಹೊರಡಿಸಿದ್ದು, ವಾರದ ರಜೆ, ತುರ್ತು ರಜೆ ಹೊರತುಪಡಿಸಿ ಉಳಿದ ರಜೆಗಳನ್ನು ರದ್ದುಮಾಡಲಾಗಿದೆ. ಬೇಕಾಬಿಟ್ಟಿ ರಜೆ ತೆಗೆದುಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.