
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಘೋಷಣೆ ಮಾಡಿದ್ದಾರೆ.
ಸಚಿವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ ಎಂದು ಘೋಷಣೆ ಮಾಡಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಕೈಗೊಂಡಿರುವ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾರೂ ಬಸ್ ಗಳನ್ನು ತೆಗೆಯಬೇಡಿ ಎಂದು ಮನವಿ ಮಾಡಿದ್ದಾರೆ.
ವಿಕಾಸಸೌಧದಲ್ಲಿ ಮಾತುಕತೆ ಯಶಸ್ವಿಯಾಗಿದೆ ಎಂದು ಹೇಳಿದ್ದ ಚಂದ್ರಶೇಖರ್, ಫ್ರೀಡಂ ಪಾರ್ಕ್ ನಲ್ಲಿ ಸಂಧಾನ ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ಹೇಳಲಾಗಿದೆ.