
ಬೆಂಗಳೂರು: ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಕ್ಕೆ ಚಂದ್ರಶೇಖರ್ ವಿರೋಧ ವ್ಯಕ್ತಪಡಿಸಿದ್ದರು. ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿದ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಮಾರ್ಚ್ 24ರಂದು ಸಾರಿಗೆ ನೌಕರರು ಮುಷ್ಕರ ನಡೆಸಬೇಕೆಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಚಂದ್ರಶೇಖರ್ ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.