ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ.
ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಪ್ರತಿಮೆಗಳ ಎದುರು ಧರಣಿ ನಡೆಸಲಾಗುವುದು. ನೌಕರರ ಸಮಸ್ಯೆ ಬಗ್ಗೆ ಚರ್ಚಿಸಿ ಇಲ್ಲದಿದ್ದರೆ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಳೆದ 2 ವಾರಗಳಿಂದ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಇದರ ನಡುವೆ ಸಾವಿರಾರು ಬಸ್ ಗಳ ಸಂಚಾರ ಆರಂಭವಾಗಿದೆ.