ಕೊಪ್ಪಳ: 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 10 ರವರೆಗೆ ವಿಸ್ತರಿಸಲಾಗಿದೆ.
ಸರ್ಕಾರಿ, ಖಾಸಗಿ, ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳಿಗೆ 1500 ರೂ.ರಂತೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆನ್ಲೈನ್ ಮುಖಾಂತರ ಜಮೆ ಮಾಡಲು ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕು. https://sevasindhu.karnataka.gov.in/Sevasindhu/DepartmentServicesKannada ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ನಂತರ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳ ಹಾರ್ಡ್ ಪ್ರತಿಗಳನ್ನು ಆಯಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕೊಪ್ಪಳ:08539-295070, ಗಂಗಾವತಿ: 08533-230027, ಕುಷ್ಟಗಿ: 8861610578, ಯಲಬುರ್ಗಾ: 8880482486 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.