ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜುಲೈ 27 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಎಂಎಲ್ ಸಿ ರವಿಕುಮಾರ್ ‘ ಅನ್ಯಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ಯುವತಿಯ ಸ್ನಾನದ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ಕೃತ್ಯ ಎಸಗಿದ ವಿದ್ಯಾರ್ಥಿಗಳನ್ನು ಬರೀ ಸಸ್ಪೆಂಡ್ ಮಾಡಲಾಗಿದೆ. ಇಂತಹ ಕೃತ್ಯ ಎಸಗಿದ ವಿದ್ಯಾರ್ಥಿಗಳನ್ನು ಬಂಧಿಸಬೇಕು. ಈ ಹಿನ್ನೆಲೆ ಜುಲೈ 27 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಯಲಿದೆ ಎಂದರು.
ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿದ್ದ ಮೂವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ನಂತರ ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಲಾಗಿತ್ತು.
ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿ ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳೆಲ್ಲರೂ ಹಿಂದೂಯೇತರ ಧರ್ಮಗಳಿಗೆ ಸೇರಿದವರಾಗಿರುವುದರಿಂದ ಘಟನೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.ಕಾಲೇಜಿನ ಆಡಳಿತ ಮಂಡಳಿ ಮುಚ್ಚಳಿಕೆ ಬರೆಸಿಕೊಂಡು ಮೂವರು ವಿದ್ಯಾರ್ಥಿನಿಯರ ವಿರುದ್ಧ ಶಿಸ್ತು ಕ್ರಮ ಜರುಗಿಸಿದೆ. ಹಿಂದೂ ಹೆಣ್ಣು ಮಕ್ಕಳ ವಿಡಿಯೋವನ್ನು ಚಿತ್ರೀಕರಿಸಿ ವೈರಲ್ ಮಾಡಿದ್ದವರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದೆ. ಸದ್ಯ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.