alex Certify ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ ನಲ್ಲಿ ನಡೆದಿದೆ.

ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದು, ಆತನ ಕೈಯಲ್ಲಿ ಅಂಬೇಡ್ಕರ್ ಫೋಟೋ ಕೊಟ್ಟು ಮೆರವಣಿಗೆ ನಡೆಸಲಾಗಿದೆ. ಘಟನೆಯ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ತಾಂಡವೊಂದರ 17 ವರ್ಷದ ವಿದ್ಯಾರ್ಥಿ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಾನೆ. ವಿದ್ಯಾರ್ಥಿಯ ಪೋಷಕರು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಹಾಸ್ಟೆಲ್ ನಲ್ಲಿ ಮೂರ್ನಾಲ್ಕು ವಾರಗಳಿಂದ ಪ್ರತಿ ಭಾನುವಾರ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಮಾಡಲಾಗುತ್ತಿತ್ತು. ಈ ಭಾನುವಾರ ಕೆಲಸ ಇರುವ ಕಾರಣ ಪೂಜೆಗೆ ಬರಲು ಆಗುವುದಿಲ್ಲ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಹೇಳಿದ್ದಾನೆ. ಇದರಿಂದಾಗಿ ವಿದ್ಯಾರ್ಥಿಗಳ ಗುಂಪು ಆತನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದೆ ಎಂದು ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...