ಬೆಂಗಳೂರು: ಹೋಂವರ್ಕ್ ಮಾಡದ 7ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿ ರಾಡ್ ನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.
ಹುಳಿಮಾವು ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿ ಮೊಹಮ್ಮದ್ ಫರ್ದಿನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹುಳಿಮಾವು ಬಿಜಿ ರಸ್ತೆಯಲ್ಲಿರುವ ಖಾಸಗಿ ಶಾಲೆ ವಿದ್ಯಾರ್ಥಿ ಹಲ್ಲೆಗೊಳಗಾಗಿದ್ದು, ಶಾಲೆಯ ಆಡಳಿತ ಮಂಡಳಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆಸಿದೆ.
ಪೊಲೀಸರು, ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಬುಧವಾರ ಮೊಹಮ್ಮದ್ ಫರ್ದಿನ್ ಹೋಂ ವರ್ಕ್ ಮಾಡಿಕೊಂಡು ಬಂದಿರಲಿಲ್ಲ ಎಂದು ಶಿಕ್ಷಕಿ ಆತನ ಕೈಗೆ ರಾಡ್ ನಿಂದ ರಕ್ತ ಬರುವಂತೆ ಹೊರಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಕಿರುಚಾಡಿದ್ದು, ಮನೆಗೆ ಬಂದು ಪೋಷಕರ ಬಳಿ ವಿಷಯ ತಿಳಿಸಿದ್ದಾನೆ.