alex Certify Shocking: ಹೋಮ್ ವರ್ಕ್ ಮಾಡದ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಹೋಮ್ ವರ್ಕ್ ಮಾಡದ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ..!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹೋಮ್ ವರ್ಕ್ ಮಾಡದಿರುವುದು ವಿದ್ಯಾರ್ಥಿಯೊಬ್ಬನಿಗೆ ದುಬಾರಿಯಾಗಿ ಪರಿಣಮಿಸಿದೆ. ಹೋಮ್ ವರ್ಕ್ ಮಾಡದ ವಿದ್ಯಾರ್ಥಿ ಮೇಲೆ ಕೋಪಗೊಂಡ ಶಿಕ್ಷಕನೊಬ್ಬ, ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾನೆ.

ವಿದ್ಯಾರ್ಥಿ ಹತ್ಯೆ ಮಾಡಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮೃತ ವಿದ್ಯಾರ್ಥಿ 7ನೇ ತರಗತಿ ವಿದ್ಯಾರ್ಥಿ ಎನ್ನಲಾಗಿದೆ. 13 ವರ್ಷದ ಗಣೇಶ್, ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾನೆ. ವಿದ್ಯಾರ್ಥಿ, ಹೋಮ್ ವರ್ಕ್ ಮಾಡದ ಕಾರಣ ಶಿಕ್ಷಕ ಥಳಿಸಿದ್ದಾನೆ.

ಶಿಕ್ಷಕ ಹೊಡೆಯುತ್ತಿದ್ದಂತೆ ವಿದ್ಯಾರ್ಥಿ ಮೂರ್ಛೆ ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ. ಆರೋಪಿ ಶಿಕ್ಷಕ 35 ವರ್ಷದ ಮನೋಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಸಿದ ನಂತ್ರ ಶಾಲೆ ಮಾನ್ಯತೆ ಸ್ಥಗಿತಗೊಳಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...