ಬೆಂಗಳೂರು: ಮೊಹಮ್ಮದ್ ನಲಪಾಡ್, ಯೂಥ್ ಕಾಂಗ್ರೆಸ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಣಕಾಸು ವ್ಯವಹಾರದಿಂದ ಪರಿಚಯವಾಗಿ ಬಳಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಸಾಲ ತೀರಿಸಿದರೂ ಬಿಡದೇ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದು, ಅಲ್ಲದೇ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ವಿದ್ಯಾರ್ಥಿ ದೂರು ನೀಡಿದ್ದಾನೆ.
ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ವಿದ್ಯಾರ್ಥಿ ಜೀವನ್ ಜೈನ್ ಎಂಬಾತನಿಗೆ ಗ್ಯಾಂಗ್ ಒಂದು ಈ ರೀತಿ ಕಿರುಕುಳ ಹಿಂಸೆ ನೀಡುತ್ತಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿ ಜೀವನ್ ಜೈನ್ ಆಯುಷ್ ಶ್ರೀನಿವಾಸ್ ಎಂಬಾತನಿಂದ ಇವೆಂಟ್ ಒಂದರ ಸಲುವಾಗಿ 3 ಲಕ್ಷ ಹಣ ಪಡೆದಿದ್ದನಂತೆ ಹಣ ವಾಪಾಸ್ ಕೊಟ್ಟರೂ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕುತ್ತಿರುವುದಾಗಿ ವಿದ್ಯಾರ್ಥಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.