ರಾಯಚೂರು: ಕಳೆದ 22 ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ರಾಯಚೂರು ಕೃಷಿ ವಿಜ್ಞಾನ ವಿವಿ ತಾಂತ್ರಿಕ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿದ್ದಾರೆ.
ಕೃಷಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಯಲ್ಲಿ ಕೃಷಿ ತಾಂತ್ರಿಕ ಪದವೀಧರರಿಗೆ ಶೇಕಡ 15 ರಷ್ಟು ಹುದ್ದೆ ಮೀಸಲಿಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಬೇಡಿಕೆ ಈಡೇರಿಸಲು ಒತ್ತಾಯಿಸಿದ್ದಾರೆ. ಸರ್ಕಾರ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೃಷಿ ತಾಂತ್ರಿಕ, ಆಹಾರ ತಂತ್ರಜ್ಞಾನ, ಕೃಷಿ ಮಾರುಕಟ್ಟೆ, ಸಹಕಾರ, ಜೈವಿಕ ತಂತ್ರಜ್ಞಾನ ಪದವೀಧರರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.