ಚಿತ್ರದುರ್ಗ: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಉಚಿತವಾಗಿ ನೀಟ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಸೆಂಟರ್ ಗಳಿಗೆ ತೆರಳಿ ದುಬಾರಿ ಶುಲ್ಕ ನೀಡಿ ತರಬೇತಿ ಪಡೆಯುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.
ಸರ್ಕಾರಿ ಕಾಲೇಜ್ ಗಳಲ್ಲಿ ಉಚಿತ ನೀಟ್ ತರಬೇತಿಗೆ ಅನುದಾನ ನೀಡಲು ಸಿಎಂಗೆ ಮನವಿ ಮಾಡಲಾಗಿದ್ದು, ಅವರು ಅನುದಾನ ನೀಡುವ ಭರವಸೆ ಇದೆ ಎಂದು ಸಚಿವರು ಹೇಳಿದ್ದಾರೆ.