alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ

ಚಿತ್ರದುರ್ಗ: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಉಚಿತವಾಗಿ ನೀಟ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಸೆಂಟರ್ ಗಳಿಗೆ ತೆರಳಿ ದುಬಾರಿ ಶುಲ್ಕ ನೀಡಿ ತರಬೇತಿ ಪಡೆಯುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.

ಸರ್ಕಾರಿ ಕಾಲೇಜ್ ಗಳಲ್ಲಿ ಉಚಿತ ನೀಟ್ ತರಬೇತಿಗೆ ಅನುದಾನ ನೀಡಲು ಸಿಎಂಗೆ ಮನವಿ ಮಾಡಲಾಗಿದ್ದು, ಅವರು ಅನುದಾನ ನೀಡುವ ಭರವಸೆ ಇದೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...