ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ವಿಜಯಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ತಂದೆ-ತಾಯಿ ಡಿವೋರ್ಸ್ ಬಳಿಕ ತಾಯಿ ಜೊತೆ ಇದ್ದ ಈಕೆ ಖಿನ್ನತೆಗೆ ಜಾರಿದ್ದಳು ಎನ್ನಲಾಗಿದೆ.
ಕಾಲೇಜಿಗೆ ಹೋಗ್ತೀನಿ ಎಂದು ಹೇಳಿ ಹೋಗಿದ್ದ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.