ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಓದುತ್ತಿದ್ದ ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನಾಲ್ಕನೇ ವರ್ಷದ ಏರೋ ಸ್ಪೇಸ್ ವಿದ್ಯಾರ್ಥಿಯಾಗಿರುವ ಅಕ್ಷಯ ರೆಡ್ಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.