alex Certify BIG NEWS: ರತ್ನಪುರಿ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರತ್ನಪುರಿ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೈಸೂರು: ವಿದ್ಯಾರ್ಥಿಯೋರ್ವನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ವಿದ್ಯಾರ್ಥಿಯೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮುತ್ತುರಾಜ್ ಎಂಬ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಪೋಷಕರು ಹಾಗೂ ಕುಟುಂಬದವರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದರೆ, ಮುತ್ತುರಾಜ್ ದಾಸನಪುರದ ರವಿಕುಮಾರ್ ಹಾಗೂ ವಸಂತಾ ದಂಪತಿ ಪುತ್ರ.

ಅನ್ಯಕೋಮಿನ ಯುವತಿ ಜೊತೆ ಮಾತನಾಡಿದ್ದಕ್ಕೆ ಯುವತಿಯ ಕಡೆಯವರು ವಿದ್ಯಾರ್ಥಿಯನ್ನು ಕೊಲೆಗೈದು ನೇಣು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...