
ತುಮಕೂರು: ವಾಲಿಬಾಲ್ ಆಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
14 ವರ್ಷದ ಧನು ಮೃತ ಬಾಲಕ. ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಧನು ಶಾಲೆಯ ಆವಣದಲ್ಲಿ ವಾಲಿಬಾಲ್ ಆಡುತ್ತಿದ್ದ. ಈ ವೇಳೆ ಏಕಾಏಕಿ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.