ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹನುಮನಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಡೆಂಘೀಗೆ ಬಲಿಯಾಗಿದ್ದಾರೆ.
ಅನುಷಾ(18) ಮೃತಪಟ್ಟ ವಿದ್ಯಾರ್ಥಿನಿ. ಪಿಯುಸಿಯಲ್ಲಿ ಶೇಕಡ 93 ರಷ್ಟು ಅಂಕ ಗಳಿಸಿದ್ದ ಅನುಷಾ ಇಂಜಿನಿಯರಿಂಗ್ ಓದುವ ಬಯಕೆ ಹೊಂದಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಬೆಳಗ್ಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಜ್ವರ ಕಡಿಮೆಯಾಗದೆ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಅನುಷಾ ಮೃತಪಟ್ಟಿದ್ದಾರೆ.