ಶಂಕಿತ ಇಲಿ ಜ್ವರದಿಂದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ನಗರದ ಕಮಲಾ ನೆಹರು ಪದವಿ ಕಾಲೇಜಿನ ವಿದ್ಯಾರ್ಥಿನಿ ಶಂಕಿತ ಇಲಿ ಜ್ವರಕ್ಕೆ ಬಲಿಯಾಗಿದ್ದಾರೆ. ಶಿಕಾರಿಪುರ ತಾಲ್ಲೂಕು ಸಂಕ್ಲಾಪುರ ಗ್ರಾಮದ ಆರ್. ಪಲ್ಲವಿ(21) ಮೃತಪಟ್ಟವರು.

ಬುಧವಾರ ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪಲ್ಲವಿ ಮೃತಪಟ್ಟಿದ್ದಾರೆ. ಕಳೆದ 20 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಶಿಕಾರಿಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರ ಸಾವಿಗೆ ಇಲಿ ಜ್ವರ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಇಲಿ ಜ್ವರದಿಂದ ಕಿಡ್ನಿ ವಿಫಲವಾಗಿರುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ, ಇದಕ್ಕೆ ಪೂರಕ ದಾಖಲೆಗಳನ್ನು ನೀಡಿಲ್ಲವೆಂದು ಕುಟುಂಬದವರು ಹೇಳಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read