ಚೆನ್ನೈ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚುತ್ತಿದೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ರಾಣಿಪೇಟ್ ನಲ್ಲಿ ಖಾಸಗಿ ಶಾಲೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿನಿ ತರಗತಿಯಲ್ಲಿ ಏಕಾಏಕಿ ಕುಸಿದು ಬೀಳುತ್ತಿರುವ ದೃಶ್ಯ ಕ್ಲಾಸ್ ರೂಂನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತಕ್ಷಣ ವಿದ್ಯಾರ್ಥಿನಿಯನ್ನು ಮೆಲ್ವಿಶಾರಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದಾಗಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಬಾಲಕಿ ಕೆಲ ದಿನಗಳಿಂದ ಹೃದಯಸಂಬಂಧಿ ಕಾಯಿಲೀ ಚಿಕಿತ್ಸೆ ಪಡೆಯುತ್ತಿದ್ದಳು.