alex Certify ಫುಡ್ ಪಾಯ್ಸನ್: 137 ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫುಡ್ ಪಾಯ್ಸನ್: 137 ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್ ನಲ್ಲಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯರು ರಾತ್ರಿ ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ತಡರಾತ್ರಿ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಅವರನ್ನು ಸೇರಿಸಲು ಪರದಾಡುವಂತಾಗಿದ್ದು, ವಿದ್ಯಾರ್ಥಿನಿಯರ ಪೋಷಕರು ಆಸ್ಪತ್ರೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ವಿದ್ಯಾರ್ಥಿನಿಯರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫುಡ್ ಪಾಯ್ಸನ್ ನಿಂದ ಹೀಗಾಗಿರಬಹುದು ಎಂದು ಹೇಳಲಾಗಿದೆ. ಚಿಕಿತ್ಸೆ ಬಳಿಕ ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ನಿರೀಕ್ಷಕ ಡಾ. ಅಶೋಕ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...