alex Certify ಹೊಟ್ಟೆ ನೋವಿನ ಔಷಧ ಬದಲು ಕ್ರಿಮಿನಾಶಕ ಸೇವಿಸಿದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆ ನೋವಿನ ಔಷಧ ಬದಲು ಕ್ರಿಮಿನಾಶಕ ಸೇವಿಸಿದ ಯುವಕ ಸಾವು

ದಾವಣಗೆರೆ: ಹೊಟ್ಟೆ ನೋವಿನ ಔಷಧ ಬದಲಿಗೆ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ ಯುವಕ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ವೆಂಕಟೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ.

ವಿಜಯ್ ಕೃಷ್ಣ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ದಾವಣಗೆರೆ ವಿವಿಯಲ್ಲಿ ಎಂಬಿಎ ಓದುತ್ತಿದ್ದ ವಿಜಯ್ ಕೃಷ್ಣ ಆಕಸ್ಮಿಕವಾಗಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ನಾಟಿ ಔಷಧಿ ಪಡೆದಿದ್ದರೂ ಗುಣಮುಖ ಆಗಿರಲಿಲ್ಲ. ಮನೆಯಲ್ಲಿ ಆಕಸ್ಮಿಕವಾಗಿ ಹೊಟ್ಟೆ ನೋವಿನ ಔಷಧದ ಬದಲಿಗೆ ಕ್ರಿಮಿನಾಶಕ ಸೇವಿಸಿದ್ದಾರೆ. ಗುರುವಾರ ಘಟನೆ ನಡೆದಿದ್ದು, ಅವರನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...