
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ವಿದ್ಯಾರ್ಥಿ ಸುಳಿವು ಸಿಕ್ಕಿಲ್ಲ. ಇದರಿಂದ ನೊಂದ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಫೆ.25ರಿಂದ ನಾಪತ್ತೆಯಗೈರುವ ವಿದ್ಯಾರ್ಥಿ ದಿಗಂತ್ ಸುಳಿವು ಸಿಕ್ಕಿಲ್ಲ. ಇದರಿಂದ ಪೋಷಕರು ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಚ್ 12ರೊಳಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಇದೇ ವೇಳೆ ಅರ್ಜಿ ವಿಚಾರಣೆಯಲ್ಲಿ ಮಾರ್ಚ್ 13ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗ್ಂತ್ ಫೆ.25ರಂದು ಸಂಜೆ ಮನೆಯಿಂದ ಹೊರ ಹೋದವನು ಏಕಾಏಕಿ ನಾಪತ್ತೆಯಾಗಿದ್ದಾನೆ. ಆತನ ಚಪ್ಪಲಿ ಹೈವೆಯಲ್ಲಿ ಪತ್ತೆಯಾಗಿದ್ದು, ಚಪ್ಪಲಿ ಮೇಲೆ ರಕ್ತದ ಕಲೆಗಳಿವೆ ಎಂದು ಹೇಳಲಾಗಿತ್ತು. ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಗಿದೆ.