ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ನಗರದ ಪಿ.ಸಿ. ಜಾಬೀನ್ ಸೈನ್ಸ್ ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಫಯಾಜ್ ಹತ್ಯೆ ಮಾಡಿದ್ದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಆರೋಪಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಆರೋಪಿ ಫಯಾಜ್ ಗೆ ವ್ಯಾಸಂಗ ಮುಂದುವರಿಸಲು ಕಾಲೇಜು ಅವಕಾಶ ಕಲ್ಪಿಸಿದೆ.
ಈ ಮಾಹಿತಿ ತಿಳಿದ ಶ್ರೀರಾಮಸೇನೆ ಮುಖಂಡರು ಶುಕ್ರವಾರ ಕಾಲೇಜಿಗೆ ಭೇಟಿ ನೀಡಿ ಪ್ರಿನ್ಸಿಪಾಲ್ ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಾದ ನಂತರ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.