ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೊಲೆಯಾದ ಬಾಲಕಿ. ಶಾಲೆ ಮುಗಿಸಿ ಹೋಗುವಾಗ ಬಾಲಕಿಯನ್ನು ಹತ್ಯೆ ಮಾಡಲಾಗಿದೆ.
ಅರಸೀಕೆರೆ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಅರಸೀಕೆರೆ ತಾಲೂಕಿನ ಜಾಣಘಟ್ಟ ಗ್ರಾಮದ ನಿವಾಸಿ ಶರತ್ ಕೃತ್ಯವಸೆಗಿದ್ದಾನೆ. ಬಾಲಕಿಯನ್ನು ಹತ್ಯೆ ಮಾಡಿದ ನಂತರ ಅರಸೀಕೆರೆ ತಾಲೂಕಿನ ಬಂಡಿಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಸ್ಥಳಕ್ಕೆ ಪೊಲೀಸ್ ಅಧಿಕ್ಷಕರಾದ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.