
ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ಬೆಳಗುಂಬ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಭೂಮಿಕಾ ಮೃತಳು. ಪದವಿ ಓದುತ್ತಿದ್ದ ಶರತ್ ಎಂಬ ಯುವಕ ಭೂಮಿಕಾ ಹಿಂದೆ ಬಿದ್ದು, ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಭೂಮಿಕಾ ನಿರಾಕರಿಸಿದ್ದಳು. ಭೂಮಿಕಾ ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಬಳಿಕ ಅರಸಿಕೆರೆ ತಾಲೂಕಿನ ಬಂಡಿಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಹಾಗೂ ಅರಸಿಕೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.