alex Certify BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಕಳೆದವಾರ ಶಾಲೆಗೆ ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಮೊಬೈಲ್ ಲೊಕೇಷನ್ ಆಧಾರದ ಮೇಲೆ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು, ಯಲಹಂಕ ಬಳಿ ಬಾಡಿಗೆ ಮನೆಯೊಂದರಲ್ಲಿ 14 ವರ್ಷದ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿ ಪ್ರತಿದಿನ ದಾಬಸ್ ಪೇಟೆಯಿಂದ ತ್ಯಾಮಗೊಂಡ್ಲುಗೆ ಶಾಲೆಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದಳು. ಆರೋಪಿ ಅದೇ ಬಸ್ ನಲ್ಲಿ ಕ್ಲೀನರ್ ಆಗಿದ್ದ.

ಆರೋಪಿ ಆನಂದ್ ವಿರುದ್ಧ ಈ ಹಿಂದೆ 2021ರಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಮೂರು ವರ್ಷ ಜೈಲು ಸೇರಿ ಬಿಡುಗಡೆಯಾಗಿ ಬಂದು ಕ್ಲೀನರ್ ಆಗಿ ಕೆಲದ್ಸ ಮಾಡುತ್ತಿದ್ದವನು ಮತ್ತದೇ ಹಳೇ ಚಾಳಿ ಮುಂದುವರೆಸಿದ್ದ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...