ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಆರೋಪಿ ವಿಚಾರಣೆ ವೇಳೆ ಈ ಮಾಹಿತಿ ನೀಡಿದ್ದು, ನಾವಿಬ್ಬರು ಒಪ್ಪಿಗೆ ಮೇರೆಗೆ ಲೈಂಗಿಕ ಕ್ರಿಯೆ ನಡೆಸುವಾಗ ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿಸಿದ್ದಾನೆ. ರಕ್ತಸ್ರಾವವಾಗಿ ಅಸ್ವಸ್ಥಳಾಗಿದ್ದ ಆಕೆಯನ್ನು ಕೂಡಲೇ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ ಎಂದು ಆರೋಪಿ ಹೇಳಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತಳ ಸಹೋದರನಿಗೆ ಆರೋಪಿ ಪರಿಚಯವಿದ್ದ ಹಿನ್ನೆಲೆಯಲ್ಲಿ ಪ್ಯಾರಾಮೆಡಿಕಲ್ ಗೆ ವಿದ್ಯಾರ್ಥಿಯನ್ನು ಸೇರಿಸಲು ಕರೆತಂದಿದ್ದ. ಡಿಸೆಂಬರ್ 15 ರಂದು ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿ ಕಾಲೇಜು ಕೆಲಸ ಬಾಕಿ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಳು. ಈ ವೇಳೆ ಆಕೆಯನ್ನು ತನ್ನ ರೂಮಿಗೆ ಕರೆಸಿಕೊಂಡಿದ್ದ. ಇಬ್ಬರೂ ಒಪ್ಪಿ ಲೈಂಗಿಕ ಕ್ರಿಯೆ ನಡೆಸುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ವರದಿಗೆ ಪೊಲೀಸರು ಕಾಯುತ್ತಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.