alex Certify ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ ಸತೀಶ್(38) ಎಂಬುವನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ಓದುತ್ತಿದ್ದು, ಜೂ. 4ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದ. ಆತ್ಮೀಯತೆ ಬೆಳೆಸಿಕೊಂಡಿದ್ದ ಆರೋಪಿ ಕಳೆದ ಜುಲೈ 21ರಂದು ನೆಲ್ಯಾಡಿಗೆ ಬರಲು ಹೇಳಿ ಅಲ್ಲಿಗೆ ಬಂದ ವಿದ್ಯಾರ್ಥಿನಿಯನ್ನು ಪಿಕ್ ಅಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಸಮೀಪದ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...