ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾಂಬೆ ದೇವಸ್ಥಾನದ ಸಮೀಪ ನದಿಯಲ್ಲಿ ಮುಳುಗಿ ಬೆಂಗಳೂರಿನ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಜಿಗಣಿಯಲ್ಲಿರುವ ಕೃಷ್ಣ ಕಾಲೇಜಿನ ವಿದ್ಯಾರ್ಥಿ ಚಂದನ್ ಮೃತಪಟ್ಟವರು ಎಂದು ಹೇಳಲಾಗಿದೆ. 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.