ಬೆಂಗಳೂರು: ಶಾಲೆಗಳು ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದು, 9, 10ನೇ ತರಗತಿವರೆಗೆ ವಿಸ್ತರಿಸಲು ಬಯಸುವ ಶಾಲೆಗಳು ಪ್ರತಿ ವಿದ್ಯಾರ್ಥಿಗಳಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಹೇಳಲಾಗಿದೆ.
ಕೆಲವು ಖಾಸಗಿ ಶಾಲೆಗಳಲ್ಲಿ ಒಂದು ಬೆಂಚ್ ನಲ್ಲಿ ಮೂವರು ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿದೆ. ಇದರಿಂದ ಮಕ್ಕಳು ಪಾಠದ ಕಡೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳಿಗೆ ತೊಂದರೆಯಾಗುತ್ತಿದೆ. ಕೆಲವೊಮ್ಮೆ ಮಕ್ಕಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇದು ಇಲಾಖೆಯ ಗಮನಕ್ಕೆ ಬಂದಿದ್ದು, ಹೀಗಾಗಿ ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಜಾಗ ಕಡ್ಡಾಯವಾಗಿ ಮೀಸಲಿಡಬೇಕೆಂದು ಹೇಳಲಾಗಿದೆ.