BREAKING NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸರ್ಕಾರಿ ಶಾಲೆ ಶಿಕ್ಷಕ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.

ಮಜುನಾಥ್ ಬಂಧಿತ ಶಿಕ್ಷಕ. ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ವಿದ್ಯಾರ್ಥಿನಿಯರ  ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಯೋಗದ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಶಿಕ್ಷಕ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read