
ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ -ಚಂದ್ರಿಕಾ ದಂಪತಿಯ ಪುತ್ರಿ ಭಾಗ್ಯಶ್ರೀ(16) ಮೃತಪಟ್ಟ ಬಾಲಕಿ.
ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಯಲ್ಲಿ ಭಾಗ್ಯಶ್ರೀ ಹತ್ತನೇ ತರಗತಿ ಓದುತ್ತಿದ್ದು, ಬುಧವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾಗ್ಯಶ್ರೀ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.