ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.