ಶಿವಮೊಗ್ಗ: ಎಂಟನೇ ತರಗತಿಯ ಓದುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ತಂದೆ ಶಿವಮೊಗ್ಗದ ಕೆಆರ್ ಪುರಂ ನಿವಾಸಿಯಾಗಿದ್ದು, ಬಿ.ಹೆಚ್. ರಸ್ತೆಯಲ್ಲಿ ಶೂ ಮಾರ್ಟ್ ಹೊಂದಿದ್ದಾರೆ. ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.