
ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ.
ಸರ್ಕಾರಿ ಶಾಲೆಯ ಶಿಕ್ಷಕ ಮಾರಪ್ಪ ಬಂಧಿತ ಆರೋಪಿ. ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆರೋಪಿತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ಬಾಲಕಿ ಮಾರ್ಚ್ 22 ರಂದು ಶಾಲೆಗೆ ಹೋದಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿಷಯ ಬಹಿರಂಗಪಡಿಸದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ತಾಯಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.