
ಮೈಸೂರು: ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ಘಟನೆ ನಡೆದಿದೆ.
ಶಿಕ್ಷಕ ಗಿರೀಶ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ಜಂತುಹುಳು ಮಾತ್ರೆ ಎಂದು ಹೇಳಿ ನಿದ್ದೆ ಬರುವ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಾಪತ್ತೆಯಾಗಿರುವ ಶಿಕ್ಷಕ ಗಿರೀಶ್ ಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.