
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಕಾಮದಾಟ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿಯ ಕಾಲೇಜಿನಲ್ಲಿ ಬಂಧಿತ ಆರೋಪಿ ವ್ಯಾಸಂಗ ಮಾಡುತ್ತಿದ್ದನಲ್ಲದೇ, ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದ. ಕೆಲವು ಯುವತಿಯರೊಂದಿಗೆ ಆರೋಪಿ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಆರೋಪಿ ಬಂಧನದ ಬಳಿಕ ಶಿವಮೊಗ್ಗ ಸಿಇಎನ್ ಠಾಣೆ ಪೊಲೀಸರು ಅಶ್ಲೀಲ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಶ್ಲೀಲ ವಿಡಿಯೋ ಶೇರ್, ಸ್ಟೋರ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಆರೋಪ ಸಾಬೀದಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.