![](https://kannadadunia.com/wp-content/uploads/2019/01/cet-cut-1.jpg)
ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ನ್ಯಾಚೂರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಬಿ.ಎಸ್ಸಿ, ಕೃಷಿ ಕೋರ್ಸ್ ಗಳು, ಪಶುಸಂಗೋಪನೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ಇನ್ನು ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಷ್ಕರಿಸಿದ್ದು, ಈ ಮೊದಲು ಏಪ್ರಿಲ್ 20 ಮತ್ತು 21 ರಂದು ಪರೀಕ್ಷೆ ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿತ್ತು. ಆದರೆ ಅದೇ ದಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆ ನಿಗದಿಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಏ. 18 ರಿಂದ 20 ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ.
![](https://kannadadunia.com/wp-content/uploads/2024/01/WhatsApp-Image-2024-01-10-at-7.17.32-AM.jpeg)