ಚಿತ್ರದುರ್ಗ: 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು.
2024-25ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೋಂದಣಿ ಮಾಡಿಸಲು ಕೋರಿದೆ.
ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.