ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮಕ್ಕಳಿಗೆ 3 ಹಾಗೂ ಸಫಾಯಿ ಕರ್ಮಚಾರಿ ಮಕ್ಕಳಿಗೆ 2 ಲ್ಯಾಪ್ಟಾಪ್ ವಿತರಿಸಲು ಅವಕಾಶವಿರುತ್ತದೆ. ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾಭ್ಯಾಸ ಮಾಡುತ್ತಿರಬೇಕು. ಅರ್ಜಿದಾರರು ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16, ಗಣೇಶ್ ಲೇಔಟ್ 1ನೇಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.