ಬೆಂಗಳೂರು: ಸಿಂಧೂರ, ತಿಲಕ ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂಧೂರ, ತಿಲಕ, ಬಿಂದಿ, ನಾಮ, ಬಳೆ ಶೃಂಗಾರದ ವಸ್ತುಗಳು. ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದರೆ ಕ್ರಮಕೈಗೊಳ್ಳಲಾಗುತ್ತದೆ. ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ. ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.