alex Certify BIG NEWS: ಸಿಂಧೂರ, ತಿಲಕ ಧರಿಸಿದವರಿಗೆ ತರಗತಿಗೆ ಪ್ರವೇಶ ನಿರಾಕರಿಸುವಂತಿಲ್ಲ; ಸಚಿವ ನಾಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಂಧೂರ, ತಿಲಕ ಧರಿಸಿದವರಿಗೆ ತರಗತಿಗೆ ಪ್ರವೇಶ ನಿರಾಕರಿಸುವಂತಿಲ್ಲ; ಸಚಿವ ನಾಗೇಶ್

ಬೆಂಗಳೂರು: ಸಿಂಧೂರ, ತಿಲಕ ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂಧೂರ, ತಿಲಕ, ಬಿಂದಿ, ನಾಮ, ಬಳೆ ಶೃಂಗಾರದ ವಸ್ತುಗಳು. ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದರೆ ಕ್ರಮಕೈಗೊಳ್ಳಲಾಗುತ್ತದೆ. ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ. ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...