ಬೆಂಗಳೂರು: ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಜೂನ್ 1ರಿಂದ ಬಿಎಂಟಿಸಿ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲಿದೆ. ಬಸ್ ಪಾಸ್ ಗಳಿಗಾಗಿ ಅರ್ಜಿಯನ್ನು https://sevasindhu.karnataka.gov.inನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪಾಸ್ ಗಳು ದೊರೆಯುವ ಸ್ಥಳ: ಬೆಂಗಳೂರು ಒನ್, ಕೆಂಪೇಗೌಂಡ ಬಸ್ ನಿಲ್ದಾಣ-ಮೆಜೆಸ್ಟಿಕ್, ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಆನೇಕಲ್ ಬಸ್ ನಿಲ್ದಾಣಗಳಲ್ಲಿ ಬೆಳಿಗ್ಗೆ 8 ಗಂತೆಯಿಂದ ಸಂಜೆ 6:30ರವರೆಗೆ ಪಾಸ್ ಗಳನ್ನು ವಿತರಿಸಲಾಗುತ್ತದೆ.
ಇನ್ನು ಶಕ್ತಿ ಯೋಜನೆಯಡಿ ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.
ಹೆಚ್ಚಿನ ವಿವರಗಳಿಗಾಗಿ ಬಿಎಂಟಿಸಿ ಕಾಲ್ ಸೆಂಟರ್ ಸಂಖ್ಯೆ 080-22483777 ಅಥವಾ ಬಿಎಂಟಿಸಿ ವೆಬ್ ಸೈಟ್ ಗೆ ಭೇಟಿ ನೀಡಬಹುದು.