ನವದೆಹಲಿ: ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರೊಂದಿಗೆ 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಭಾಷೆಗಳ ಅಧ್ಯಯನ ಕಡ್ಡಾಯಗೊಳಿಸಲಾಗಿದೆ.
ಶಿಕ್ಷಣ ಸಚಿವಾಲಯ ಹೊಸ ನಿಯಮಾವಳಿಗಳನ್ನು ಪ್ರಕಟಿಸಿದ್ದು, ಎನ್ಇಪಿ ಪ್ರಕಾರ ಪಠ್ಯಕ್ರಮ ಸಿದ್ಧವಾಗಿದೆ. ಬೋರ್ಡ್ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಸಲ ನಡೆಸಲಿದ್ದು, ಈ ಎರಡು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿರುತ್ತದೆಯೋ ಆ ಪರೀಕ್ಷೆಯ ಅಂಕಗಳನ್ನು ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿದೆ.
ವಿದ್ಯಾರ್ಥಿಗಳು ಎರಡು ಭಾಷೆ ಆಯ್ಕೆ ಮಾಡಿಕೊಳ್ಳಬೇಕಿದ್ದು, ಒಂದು ಭಾರತೀಯ ಭಾಷೆಯಾಗಿರಬೇಕು ಎಂದು ಸೂಚಿಸಲಾಗಿದೆ. 11 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಯು ಕಲೆ, ವಾಣಿಜ್ಯ, ವಿಜ್ಞಾನ ವಿಭಾಗಗಳಿಗೆ ಸೀಮಿತವಾಗದೆ ಮೂರು ವಿಭಾಗಗಳಲ್ಲಿ ತಮಗೆ ಇಷ್ಟವಾದ ವಿಷಯ ಸಮ್ಮಿಶ್ರಣ ಮಾಡಿಕೊಂಡು ಕಲಿಕೆ ಮಾಡಿ ಕೋರ್ಸ್ ಪೂರ್ತಿಗೊಳಿಸಬಹುದಾಗಿದೆ.