ಕಲಬುರಗಿ: ಜಿಲ್ಲೆಯಲ್ಲಿ ಪದವಿ ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭವಾಗಿದೆ.
ವಿದ್ಯಾರ್ಥಿಗಳು ಸಂಸ್ಥೆಯ ಬಸ್‍ಗಳಲ್ಲಿ ಕಳೆದ ವರ್ಷದ(2019-20)ನೇ ಸಾಲಿನ ಹಳೆಯ ಬಸ್‍ಪಾಸ್ ಹಾಗೂ ಪ್ರಸಕ್ತ ವರ್ಷದಲ್ಲಿ ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆದು ಶುಲ್ಕ ಪಾವತಿಸಿದ ರಸೀದಿ ತೋರಿಸಿ ಎಲ್ಲಾ ವಿದ್ಯಾರ್ಥಿಗಳು 2021 ರ ಫೆಬ್ರವರಿ 28 ರವರೆಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಸಂಸ್ಥೆಯ ಬಸ್‍ನಲ್ಲಿ ಸಂಬಂಧಪಟ್ಟ ಮಾರ್ಗ ಹಾಗೂ ಹೊಸ ವಿಳಾಸದಲ್ಲಿರುವ ಶಾಲಾ-ಕಾಲೇಜುಗಳಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ಬಸ್‍ಪಾಸ್‍ಗಳನ್ನು ಸೇವಾ ಸಿಂಧು ಮೂಲಕ ಅರ್ಜಿ ಪಡೆದು ಬಸ್‍ಪಾಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಕೂಡಲೇ ಹೊಸ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬೇಕು.
ಈ ಹಿಂದೆ ವಿದ್ಯಾರ್ಥಿಗಳಿಗೆ ಹಳೆಯ ಬಸ್‍ಪಾಸ್‍ನ್ನು ತೋರಿಸಿ ಉಚಿತವಾಗಿ 2021ರ ಜನವರಿ 31ರವರೆಗೆ ಬಸ್‍ನಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿತ್ತು. ಆದರೆ, ಈಗ ಹೊಸ ಬಸ್‍ಪಾಸ್‍ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡಲಾಗಿರುವ ಪ್ರಯುಕ್ತ ವಿದ್ಯಾರ್ಥಿಗಳು ಹಳೆಯ ಬಸ್‍ಪಾಸ್ ತೋರಿಸಿ 2021ರ ಫೆಬ್ರವರಿ 28ರವರೆಗೆ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಬಹುದಾಗಿದೆ ಅವರು ತಿಳಿಸಿದ್ದಾರೆ.