alex Certify ವಿದ್ಯಾರ್ಥಿಗಳಿಗೆ ಹೊಸ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಹೊಸ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸ್ತುತ ಎಲ್ಲಾ ಶಾಲಾ-ಕಾಲೇಜುಗಳ ವಿವಿಧ ತರಗತಿಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ 2021 ರ ಜನವರಿ 31 ರೊಳಗಾಗಿ ಹೊಸ ಬಸ್‍ಪಾಸ್ ಪಡೆಯಬೇಕೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ. ಅವರು ತಿಳಿಸಿದ್ದಾರೆ.

ಹಳೆಯ ಪಾಸ್ ತೋರಿಸಿ ಸಂಸ್ಥೆಯ ಬಸ್‍ನಲ್ಲಿ ಪ್ರಯಾಣಿಸುವ ಅವಧಿಯು 2021ರ ಜನವರಿ 31 ರಂದು ಮುಕ್ತಾಯಗೊಳ್ಳಲಿದ್ದು, ಎಲ್ಲಾ ವಿದ್ಯಾರ್ಥಿಗಳು ಮೇಲ್ಕಂಡ ಅವಧಿಯೊಳಗಾಗಿ ಸೇವಾ ಸಿಂಧುವಿನ ಮೂಲಕ ಅರ್ಜಿ ಸಲ್ಲಿಸಿ ಕೂಡಲೇ ನೂತನ ಬಸ್ ಪಾಸ್‍ಗಳನ್ನು ಪಡೆದುಕೊಳ್ಳಬೇಕು.

ಅದೇ ರೀತಿ ವಿದ್ಯಾರ್ಥಿಗಳು ಕಳೆದ ವರ್ಷದ(2019-20ನೇ ಸಾಲಿ) ಹಳೆಯ  ಬಸ್‍ಪಾಸ್, ಪ್ರಸ್ತುತ ವರ್ಷದಲ್ಲಿ ಶಾಲಾ/ಕಾಲೇಜುಗಳಿಗೆ ಶುಲ್ಕ ಪಾವತಿಸಿದ ರಶೀದಿ ತೋರಿಸಿ ಸಂಬಂಧಪಟ್ಟ ಮಾರ್ಗ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ 2021ರ ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...